ಕರಾವಳಿ

ಶಾಸಕ ಕಾಮತ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ : ಅಕ್ಟೋಬರ್ 1ರಿಂದ ದಸರಾ ರಜೆ ನೀಡಲು ಒಪ್ಪಿಗೆ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್, 20 : ದಕ್ಷಿಣ ಕನ್ನಡ ಜಿಲ್ಲಾ ಪ್ರಾರ್ಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1 ರಿಂದ 15 ರ ತನಕ ನೀಡಲು ರಾಜ್ಯ ಸರಕಾರದ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಈ ಕುರಿತು ಸಚಿವರನ್ನು ಅಭಿನಂದಿಸಿದ ಶಾಸಕ ಕಾಮತ್ ಅವರು ಅಕ್ಟೋಬರ್ 1 ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಿ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಶಾಸಕರಿಂದ ಸಚಿವರಿಗೆ ಮನವಿ :

ಈ ವಿಷಯಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಶಾಸಕ ಕಾಮತ್ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಂಗಳೂರಿನಲ್ಲಿ ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30ರಿಂದಲೇ ಆರಂಭವಾಗಲಿದ್ದು, ಅದಕ್ಕೆ ಸರಿಯಾಗಿ ದಸರಾ ರಜೆಯನ್ನು ಮಂಜೂರು ಮಾಡಬೇಕು.ಮೈಸೂರು ದಸರಾದಂತೆಯೇ ಮಂಗಳೂರು ದಸರಾ ಕೂಡ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆ.29 ರಿಂದಲೇ ಆರಂಭವಾಗುತ್ತದೆ.

ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ, ಹವನ, ಕಾರ್ಯಕ್ರಮಗಳು ಪ್ರಾರಂಭವಾಗುವುದರಿಂದ ಅದರಲ್ಲಿ ಭಾಗವಹಿಸುವ ಪೋಷಕರಿಗೆ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ, ಭೋದಕ ವರ್ಗಕ್ಕೆ, ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ ಇದ್ದಲ್ಲಿ ಸಾಕಷ್ಟು ಅನುಕೂಲವಾಗುತ್ತದೆ.

ಅ.6 ರಿಂದ ರಜೆ ನೀಡಿದರೆ ಅದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿ, ವಿದ್ಯಾರ್ಥಿ ಯರಿಗೆ ತುಂಬಾ ಅನಾನುಕೂಲವಾಗುತ್ತದೆ. ಈ ಬಗ್ಗೆ ಪರಾಮರ್ಶಿಸಿ ಸೆ.30 ರಿಂದ ದಸರಾ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಬೇಕು ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಶಾಸಕ ಕಾಮತ್ ಮನವಿ ಸಲ್ಲಿಸಿದ್ದರು.

 

Comments are closed.