ಕರಾವಳಿ

ಔರಾದ್ಕರ್ ವರದಿ ಜಾರಿ ಖಂಡಿತ: ಉಡುಪಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭರವಸೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಳಿಕ ಶುಕ್ರವಾರ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಇದೇ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸರ ವೇತನ ಪರಿಷ್ಕರಣೆಯ ವಿಚಾರವಾಗಿ ಔರಾದ್ಕರ್ ವರದಿ ಜಾರಿಯಾಗುತ್ತದೆ. ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆಯನ್ನೂ ಕೊಟ್ಟಿದೆ. ಜೈಲು ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಬಿಟ್ಟು ಹೋಗಿತ್ತು. ನೂತನ ಕ್ಯಾಬಿನೆಟ್ ನಲ್ಲಿ ಅದಕ್ಕೂ ಒಪ್ಪಿಗೆ ಕೊಟ್ಟಿದ್ದು ಆರ್ಥಿಕ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದೇವೆ. ಒಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸುತ್ತೇವೆಂದರು.

ರಾಜಕಾರಣಿಗಳು, ಪೊಲೀಸರು ಮಾತ್ರವಲ್ಲದೇ ಮಠಾಧೀಶರ ಫೋನ್ ಕದ್ದಾಲಿಕೆ ವಿಚಾರವನ್ನು ಸಿಬಿಐ ವಿಚಾರಣೆ ನಡೆಸುತ್ತಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಆದರೆ ಆದೇಶವಿಲ್ಲದೆ ಫೋನ್ ಕದ್ದಾಲಿಕೆ ಮಾಡಿದ್ದರೆ ಅದು ತಪ್ಪು ಎಂದು ಹೇಳಿದ್ದಾರೆ.

ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪದ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಉತ್ತರಿಸಿದ ಬೊಮ್ಮಾಯಿ, ಕುಮಾರಸ್ವಾಮಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಸುಪ್ರೀಂ ಆದೇಶದ ಬಗ್ಗೆ, ಚುನಾವಣಾ ಆಯೋಗದ ಬಗ್ಗೆ ಪ್ರತಿಕ್ರಿಯೆ ನೀಡಲಾರೆ ಎಂದರು.

ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು.

Comments are closed.