ಕರಾವಳಿ

ಜಿಲ್ಲೆಯ ಅಭಿವೃದ್ಧಿ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಸಂಸದ ನಳಿನ್‌ ಚರ್ಚೆ

Pinterest LinkedIn Tumblr

ಮಂಗಳೂರು : ಕರ್ನಾಟಕ ಸರಕಾರದ ಆರೋಗ್ಯ ಸಚಿವರಾದ ಶ್ರೀರಾಮುಲು ಅವರು ಶುಕ್ರವಾರ ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಿಭಾಗದ ಪ್ರಭಾರಿ ಉದಯಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಆದರ್ಶ್ ಶೆಟ್ಟಿ ಎಕ್ಕಾರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Comments are closed.