ಕರಾವಳಿ

ಮಂಗಳೂರಿನ ಪುರಭವನದ ಗಾಂಧೀ ಪಾರ್ಕ್‍ನಲ್ಲಿ ನಾಳೆ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು, ಅಕ್ಟೋಬರ್.01 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ದ.ಕ ಜಿಲ್ಲಾ ಭಾರತ್ ಸೇವಾದಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯನ್ನು ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಪುರಭವನದ ಎದುರು ಗಾಂಧೀ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ.

ಅಂದು ಬೆಳಿಗ್ಗೆ 7.45 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಬಲ್ಮಠ ಇಲ್ಲಿಂದ ಪುರಭವನ ಗಾಂಧೀ ಪಾರ್ಕ್‍ವರೆಗೆ ಪ್ರಭಾತ್ ಫೇರಿ ನಡೆಯಲಿದೆ. ಅನಂತರ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಕಿರುಹೊತ್ತಿಗೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಗಾಮಧೀ ಜಯಂತಿ ಅಂಗವಾಗಿ ಅಂದು ಮಧ್ಯಾಹ್ನ 3 ಗಂಟೆಗೆ ಗಣಪತಿ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗ ದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಲ್ಯಪದವು ಶಕ್ತಿನಗರ ಇಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಅವರು ‘ಗಾಂಧೀ ಚಿಂತನೆಗಳು-ಸ್ವಚ್ಛ ಭಾರತ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Comments are closed.