ಕರಾವಳಿ

ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ಬೆಳಕಿನ ದೀಪಗಳಿಂದ ಶೃಂಗಾರಗೊಂಡ ಮಹಾನಗರ: ಎಲ್ಲೆಲ್ಲೂ ವಿದ್ಯುತ್ ದೀಪ ವರ್ಣಾಲಂಕಾರ ಸೊಬಗು

Pinterest LinkedIn Tumblr
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಮತ್ತು ವೈಭವದ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಇಡೀ ಮಹಾನಗರವೇ ಬೆಳಕಿನ ದೀಪಗಳಿಂದ ಶೃಂಗಾರಗೊಂಡಿದೆ. ನಗರದ ಸುತ್ತಮುತ್ತ ಕಟ್ಟಡಗಳು, ವ್ಯಾಪರ ಮಳಿಗೆಗಳು, ರಸ್ತೆಯ ಎರಡೂ ಬದಿಗಳಲ್ಲಿ ವಿದ್ಯುತ್ ದೀಪಗಳಿಂದ ಅಲಕೃಂತಗೊಂಡಿದೆ.

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾಂಪ್ರತಿ ನಡೆಯುವ ವೈಭವದ ಮಂಗಳೂರು ದಸರಾ ಮಹೋತ್ಸವವು ಇದೇ ಸೆ.29ರಿಂದ ಆರಂಭಗೊಂಡಿದ್ದು, ಅಕ್ಟೋಬರ್ 9ರ ಬೆಳಗ್ಗಿನವರೆಗೆ ನಡೆಯಲಿದೆ. ನವರಾತ್ರಿ ಉತ್ಸವ ಮತ್ತು ‘ಮಂಗಳೂರು ದಸರಾ’ ಮಹೋತ್ಸವ ಸಂಭ್ರಮದಲ್ಲಿರುವ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಸುಣ್ಣಬಣ್ಣದ ಸಿಂಗಾರ, ವಿದ್ಯುತ್‌ ದೀಪಗಳ ಅಲಂಕಾರ ಮತ್ತಿತರ ಸಿದ್ಧತೆಗಳನ್ನು ಮಾಡಲಾಗಿದೆ.

ಮಂಗಳೂರು ದಸರಾ ಹಿನ್ನೆಲೆಯಲ್ಲಿ ಈಗಾಗಲೇ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರವನ್ನು ವಿಧ್ಯುದ್ದೀಪಗಳಿಂದ ಶೃಂಗರಿಸಲಾಗಿದೆ. ಮಾತ್ರವಲ್ಲದೇ ದಸರಾ ಮಹೋತ್ಸವಕ್ಕೆ ಇಡೀ ಮಂಗಳೂರು ಸಜ್ಜಾಗುತ್ತಿದ್ದು, ನಗರದ ಬೀದಿಗಳು ವಿದ್ಯುತ್ ದೀಪಗಳಿಂದ ಅಲಂಕಾರ ಗೊಂಡಿದೆ.

ಶ್ರೀ ಕ್ಷೇತ್ರ ಮಾತ್ರವಲ್ಲದೇ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಮಂಗಳೂರು ದಸರಾದ ಅಂಗವಾಗಿ ನಗರವು ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದೆ. ಸಂಜೆಯಾಗುತ್ತಿದ್ದಂತೆಯೇ ವಿದ್ಯುತ್ ದೀಪಗಳು ಬೆಳಗಿ ಮಂಗಳೂರು ನಗರವೇ ಝಗಮಿಸಲಾರಂಭಿಸಿದೆ.

ಸೆ.29: ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ

ಸೆ.29ರಂದು ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, 1.೦೦ಕ್ಕೆ ಕಲಶ ಪ್ರತಿಷ್ಠೆ, 11.20ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ, 12.30 ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ಸಂಜೆ 7.೦೦ರಿಂದ ಭಜನಾ ಕಾರ್ಯಕ್ರಮಮ 9.೦೦ರಿಂದ ದೇವಿ ಪುಷ್ಪಾಲಂಕಾರ ಪೂಜೆ ನಡೆಯಿತು.

ಈ ಬಾರಿಯ ದಸರಾ ಮಹೋತ್ಸವದಲ್ಲೂ 10ಲಕ್ಷಕ್ಕೂ ಅಧಿಕ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ದೇವಸ್ಥಾನ ಆಡಳಿತ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಈ ಬಾರಿ ಹಿಂದಿನ ವರ್ಷಗಳಿಗಿಂತ ಭಿನ್ನವಾಗಿ ಶಾರದೆ ಸೇರಿದಂತೆ ನವದುರ್ಗೆಯರ ಮೆರವಣಿಗೆ ಆರಂಭದಲ್ಲಿದ್ದು, ಇತರ ಟ್ಯಾಬ್ಲೋಗಳು ಅದರ ಹಿಂದೆ ಸಾಗಲಿವೆ.

ಅ. 08ರಂದು ಶೋಭಾಯಾತ್ರೆ:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ಧನ ಪೂಜಾರಿಯವರ ನೇತ್ರತ್ವದಲ್ಲಿ ಮಂಗಳೂರು ದಸರಾ ಮಹೋತ್ಸವ ಭವ್ಯ ಶೋಭಾಯಾತ್ರೆ ಅ.೮ರಂದು ಸಂಜೆ ೪.೦೦ರಿಂದ ನಡೆಯಲಿದೆ. ಶ್ರೀ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆಯು ಕಂಬ್ಳಾ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್‌ಭಾಗ್, ಬಲ್ಲಾಳ್‌ಬಾಗ್, ಪಿವಿ‌ಎಸ್, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಚಿತ್ರಾ ಟಾಕೀಸು, ಅಳಕೆಯಾಗಿ ಶ್ರೀ ಕ್ಷೇತ್ರಕ್ಕೆ ಬರಲಿದೆ.

ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಮಹೋತ್ಸವದ ಯಶಸ್ಸಿಗೆ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಮಾಜಿ ಕೇಂದ್ರ ಸಚಿಬ ಬಿ. ಜನಾರ್ದನ ಪೂಜಾರಿಯವರ ಜೊತೆ.ಆಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಸ್‌.ಸಾಯಿರಾಂ, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕೋಶಾದಿಕಾರಿ ಪದ್ಮರಾಜ್‌ ಆರ್‌.(ಅಡ್ವಕೇಟ್), ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಮುಂಬಾಯಿ ಬಿಲ್ಲವ ಸಂಘದ ಮುಖಂಡ ಜಯ ಸಿ.ಸುವರ್ಣ, ಶ್ರೀ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸಹ ಅಧ್ಯಕ್ಷೆ ಉರ್ಮಿಳಾ ರಮೇಶ್‌ ಕುಮಾರ್, ಸದಸ್ಯರಾದ ಬಿ.ಕೆ. ತಾರನಾಥ್‌, ರವಿಶಂಕರ್‌ ಮಿಜಾರ್, ಕೆ. ಮಹೇಶ್ಚಂದ್ರ, ದೇವೇಂದ್ರ ಪೂಜಾರಿ, ಪಿ.ಕೆ. ಡಾ.ಬಿ.ಜಿ.ಸುವರ್ಣ, ಚಿತ್ತರಂಜನ್‌ ಗರೋಡಿ, ಡಿ.ಡಿ. ಕಟ್ಟೆಮಾರ್‌, ಡಾ.ಅನಸೂಯ ಸೇರಿದಂತೆ ಇನ್ನೂ ಹಲವಾರು ಮಂದಿ ಪ್ರಮುಖರು ಕೈ ಜೋಡಿಸಿದ್ದಾರೆ.

ವರದಿ ಹಾಗೂ ಚಿತ್ರ : ಸತೀಶ್ ಕಾಪಿಕಾಡ್

Comments are closed.