ಕರಾವಳಿ

ಮಂಗಳೂರಿನಲ್ಲಿ ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಸೆರೆ : ಎರಡು ಲಕ್ಷಕ್ಕೂ ಹೆಚ್ಚು ಮೌಲ್ಯದ ಕೋಕೆನ್ ವಶ

Pinterest LinkedIn Tumblr

ಮಂಗಳೂರು, ಆಕ್ಟೋಬರ್.14: ಸಾರ್ವಜನಿಕರಿಗೆ ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ ಎಂಡ್ ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಕೊಂಡಿದ್ದಾರೆ.

ಬಂಧಿತರನ್ನು ಪಳ್ನೀರ್ ನಿವಾಸಿಗಳಾದ ಫಾಸೀಮ್ ನೌಷಿಬ್ (25), ಮಹಮ್ಮದ್ ಝಾಹಿದ್ (26) ಹಾಗೂ ಮಂಜೇಶ್ವರ ಕುಂಜೆತ್ತೂರು ನಿವಾಸಿ ಅಪ್ಜಲ್ ಹುಸೈನ್ (28) ಎಂದು ಹೆಸರಿಸಲಾಗಿದೆ.

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಕೋಕೆನ್ ಖರೀದಿಸಿ ಮಂಗಳೂರಿನ ಸಾರ್ವಜನಿಕರಿಗೆ ಮಾರಾಟ ಮಾಡಿ ಅಕ್ರಮ ಹಣ ಗಳಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಂಕನಾಡಿ ಜಂಕ್ಷನ್ ರೈಲ್ವೇ ಸಿಬ್ಬಂದಿಗಳ ಸ್ಟಾಪ್ ಕ್ವಾಟ್ರಸ್ ಬಳಿ ಕೊಕೆನ್ ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿಗಳನ್ನು ಕಾರು ಸಹಿತ ವಶಕ್ಕೆ ಪಡೆದುಕೊಂಡು ಅವರಿಂದ ಸುಮಾರು 30 ಗ್ರಾಂ ತೂಕದ 2,40,000 ರೂ. ಮೌಲ್ಯದ ಕೋಕೆನ್ ವಶಕ್ಕೆ ಪಡೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಬಳಿಯಿದ್ದ ಮೊಬೈಲ್ ಫೋನ್-4 ನ್ನು, ಹಾಗೂ ಮಾರುತಿ ಕಂಪೆನಿಯ ಸ್ವೀಪ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 10,000,00/-ಆಗಿರುತ್ತದೆ. ಈ ಬಗ್ಗೆ ಇಕನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿ.ಎಸ್.ಐ ಕಬ್ಬಾಳ್ ರಾಜ್, ಸಿಸಿಬಿ ಘಟಕ ಸಿಬ್ಬಂದಿಗಳು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯ ಮಹಿಳಾ ಪಿ.ಎಸ್.ಐ ಶ್ರೀಮತಿ ಲತಾ ಮತ್ತು ಅವರ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.