ಕರಾವಳಿ

ಕಸ್ಬಾ ಬೆಂಗ್ರೆ: ಶಿಕ್ಷಕರ ವರ್ಗಾವಣೆ ಖಂಡಿಸಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ – ವರ್ಗಾವಣೆ ರದ್ದುಪಡಿಸಲು ಆಗ್ರಹ

Pinterest LinkedIn Tumblr

ಮಂಗಳೂರು, ಅಕ್ಟೋಬರ್.16: ಶಿಕ್ಷಕರ ವರ್ಗಾವಣೆ ರದ್ದುಪಡಿಸಲು ಒತ್ತಾಯಿಸಿ ಮಂಗಳೂರಿನ ತಣ್ಣಿರುಬಾವಿ ಸಮೀಪದ ಕಸ್ಬಾ ಬೆಂಗ್ರೆ ಸರಕಾರಿ ಶಾಲೆಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ ಘಟನೆ ಬುಧವಾರ ನಡೆದಿದೆ.

ಕಸ್ಬಾ ಬೆಂಗ್ರೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 5 ಮಂದಿ ಖಾಯಂ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆಗೊಳಿಸಲಾಗಿ ದ್ದು, ಹೊಸ ಶಿಕ್ಷಕರ ನೇಮಕಾತಿ ನಡೆದಿರಲಿಲ್ಲ. ಶಿಕ್ಷಣ ಇಲಾಖೆಯ ಈ ನೀತಿಯನ್ನು ಖಂಡಿಸಿ ಮತ್ತು 5 ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದು ಪಡಿಸಲು ಒತ್ತಾಯಿಸಿ ಈ ಶಾಲೆಯಲ್ಲಿ ಕಲಿಯುತ್ತಿರುವ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕರ ಹುದ್ದೆಗಳಿಗೆ ಪರ್ಯಾಯವಾಗಿ ಹೊಸ ಶಿಕ್ಷಕರ ನೇಮಕಾತಿ ಮಾಡದಿರುವುದಕ್ಕೆ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪೋಷಕರು ಕೂಡ ವಿದ್ಯಾರ್ಥಿಗಳ ಕೈಜೋಡಿಸಿದ್ದು, ಶಿಕ್ಷಣಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೆ ಹೋರಾಟ ಮುಂದುವರಿಸಲು ತೀರ್ಮಾನಿಸಿದ್ದಾರೆ.

Comments are closed.