ಕರಾವಳಿ

ಮೊಬೈಲ್ ಟವರ್ ಮಾಲ್ಹಕರಿಗೆ ನೋಟಿಸ್ ಜಾರಿಗೊಳಿಸಲು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ

Pinterest LinkedIn Tumblr

ಮಂಗಳೂರು ಅಕ್ಟೋಬರ್ 17 : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರಿಗೆ ಜಮೀನು ಕಾದಿರಿಸುವ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದೇನೆ ಮತ್ತು ಇನ್ನೂ ಕೆಲವು ಜಮೀನುಗಳ ವಿಚಾರಗಳು ಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿದೆ ಆದಷ್ಟೂ ಬೇಗನೆ ಈ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ ಹಾಗೂ ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿರುವ ಸರ್ಕಾರಿ ಜಮೀನುಗಳನ್ನು ಸರ್ವೆ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯ ಬದ್ಧವಾಗಿ ವಿತರಿಸಿ ಎಂದು ಹೇಳಿದರು.

ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಉಳ್ಳಾಲ ಶಾಸಕ ಯು ಟಿ ಖಾದರ್, ಮೂಡಬಿದ್ರೆ ಶಾಸಕ ಊಮಾನಾಥ ಕೋಟ್ಯಾನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.