ಕರಾವಳಿ

ಶಾಸಕ ಕಾಮತ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ : ಅಭಿವೃದ್ಧಿ ಕಾಮಾಗಾರಿಗಳ ಬಗ್ಗೆ ಚರ್ಚೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ  ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಗತಿ ಪರಿಶೀನಾ ಸಭೆ ನಡೆಸಿದರು.

100 ಕೋಟಿ ವಿಶೇಷ ಅನುದಾನದಲ್ಲಿ ಬಾಕಿ ಉಳಿದಿರುವ ರಸ್ತೆಗಳ ಅಭಿವೃದ್ಧಿ, ಘನ ತ್ಯಾಜ್ಯ ನಿರ್ವಹಣೆ, ನೀರು ಸರಬರಾಜು, ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಶಾಸಕ ಕಾಮತ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ಮಾತನಾಡಿದ ಅವರು, ರಸ್ತೆ ಅಗಲೀಕರಣ, ನೀರು ಸರಬರಾಜು, ಘನ ತ್ಯಾಜ್ಯ ನಿರ್ವಹಣೆ, ಉದ್ದಿಮೆ ಪರವಾನಿಗೆಯ ಸಂಬಂಧಿಸಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಳಂಬವಾಗದಂತೆ ಕ್ರಮ ತೆಗೆದುಕೊಳ್ಳುವ ವಿಚಾರವನ್ನಿಟ್ಟುಕೊಂಡು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ.ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ಬಾಕಿ ಉಳಿಸಿರುವ ಕಂದಾಯ ತೆರಿಗೆ ಪಾವತಿ, ನೀರಿನ ಬಿಲ್ಲ್ ಪಾವತಿಸಲು ಬಾಕಿಯಿರುವ ಕುರಿತು, ಉದ್ದಿಮೆ ಪರವಾನಿಗೆ ನವೀಕರಣಗೊಳಿಸದೆ ಇರುವವರ ಮೇಲೆ ಕ್ರಮ ಕೈಗೊಳ್ಳುವ ವಿಚಾರಗಳ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ರಸ್ತೆ ಅಗಲೀಕರಣ ಅಥವ ರಸ್ತೆ ಅಭಿವೃದ್ಧಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ನಡೆಸಲು ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉಪ ಆಯುಕ್ತರಾದ ಸಂತೋಷ್ ಕುಮಾರ್, ಕಂದಾಯ ಆಯುಕ್ತರಾದ ಗಾಯತ್ರಿ ನಾಯಕ್, ನಗರ ಯೋಜನಾ ಅಧಿಕಾರಿ ಜಯರಾಜ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಲಿಂಗೇ ಗೌಡ,ಗುರುರಾಜ್ ಮರಳಹಳ್ಳಿ ಮುಂತಾದವರು ಉಪಸ್ಥಿತರಿದ್ದರು.

Comments are closed.