ಕರಾವಳಿ

ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ ರೂ.3.5 ಕೋಟಿ ಅನುದಾನ : ಶಾಸಕ ಕಾಮಾತ್

Pinterest LinkedIn Tumblr

ಮಂಗಳೂರು : ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ 3.5 ಕೋಟಿ ರೂಪಾಯೀ ಅನುದಾನ ಬರಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ನಗರದ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2019 ಕಾರ್ಯಕ್ರಮ ಉದ್ಘಾಟಿಸಿ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿದರು .ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಮಂಗಳೂರು ಸ್ಮಾರ್ಟ್ ಸಿಟಿ ಯಿಂದ 10 ಕೋಟಿ ರುಪಾಯೀ ಬಿಡುಗಡೆ ಆಗಿದೆ ಎಂದು ಹೇಳಿದರು . ಕ್ರೀಡಾಗಳು ಸತತ ಪರಿಶ್ರಮ, ಛಲ ದಿಂದ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು .

ಉದ್ಘಾಟನಾ ಕಾರ್ಯಕ್ರಮದಲ್ಲಿ ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥ ನಂಜುಡಪ್ಪ ತಿಮ್ಮಯ್ಯ ,ಕಸ್ಟಮ್ಸ್ ನಿವೃತ್ತ ಸಹಾಯಕ ಆಯುಕ್ತ ರೋಹಿತ್ ಹೆಗ್ಡೆ ಉದ್ಯಮಿಗಳಾದ ಜೀತೇ0ದ್ರ ಕೊಟ್ಟಾರಿ ,ಸಂಪತ್ ಶೆಟ್ಟಿ ,ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ತಾರಾನಾಥ್ ಶೆಟ್ಟಿ, ಕೋಶಾಧಿಕಾರಿ ಕೃಷ್ಣ ಶೆಣೈ, ಸಲಹೆಗಾರ ಸುನಿಲ್ ಶೆಟ್ಟಿ ಉಪಸ್ಥಿತರಿದ್ದರು .ರೀಟಾ ಡಿ ಸೋಜಾ ಕಾರ್ಯಕ್ರಮ ನಿರೂಪಿಸಿದರು .

Comments are closed.