
(ಕಡತ ಚಿತ್ರ)
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ನಗರಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಹಾಕಿರುವ ಬ್ಯಾನರ್, ಫ್ಲೆಕ್ಸ್ ಬೋರ್ಡ್ಗಳನ್ನು ಸೋಮವಾರ ನಗರಪಾಲಿಕೆಯ ಅಧಿಕಾರಿಗಳು ತೆರವುಗೊಳಿಸಿದರು.
ಪಾಲಿಕೆಗೆ ಚುನಾವಣೆ ಭಾನುವಾರದಂದು ಘೋಷಣೆಯಾಗಿದ್ದು, ತಕ್ಷಣದಿಂದಲೇ ನಗರಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ನಗರದ ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಹಾಕಿರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.
Comments are closed.