ಉಡುಪಿ: ಉಡುಪಿ ಜಿಲ್ಲಾದ್ಯಂತ ಬಾರಿ ಮಳೆ ಹಿನ್ನೆಲೆ ಗುರುವಾರದಿಂದ ಮೂರು ದಿನ ‘ರೆಡ್ ಅಲರ್ಟ್’ ಜಾರಿಯಲ್ಲಿದೆ. ಉಡುಪಿ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಅ.25 ಶುಕ್ರವಾರದಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಮೌಖಿಕ ಆದೇಶದಲ್ಲಿ ತಿಳಿಸಿದ್ದಾರೆ.

ಕಳೆದ ಒಂದೆರಡು ದಿನಗಳಿಂದ ಜಿಲ್ಲಾದ್ಯಂತ ಮಳೆ ಮುಂದುವರಿದಿದ್ದು ಕೆಲವೆಡೆ ಸಣ್ಣ ಪ್ರಮಾಣದಲ್ಲಿ ನೆರೆ ಬಂದಿದೆ. ಈ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿಗಳು ಶಾಲೆ-ಕಾಲೇಜಿಗೆ ರಜೆ ಘೋಷಿಸಿದ್ದಾರೆ.
Comments are closed.