ಕರಾವಳಿ

ನಾಳೆ ಕನ್ನಡ ರಾಜ್ಯೋತ್ಸವ : ಮಂಗಳೂರಿನ ಕಾರ್ಯಕ್ರಮಗಳ ವಿವರ

Pinterest LinkedIn Tumblr

ಮಂಗಳೂರು ಅಕ್ಟೋಬರ್ 31 : ದ.ಕ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1ರಂದು ನೆಹರು ಮೈದಾನದಲ್ಲಿ ನಡೆಯಲಿದೆ.

ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನಡೆಸಿ ಕನ್ನಡ ರಾಜ್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ಬೆಳಿಗ್ಗೆ 7.45 ಗಂಟೆಗೆ ಜ್ಯೋತಿ ವೃತ್ತದಿಂದ ಮೆರವಣಿಗೆ ಪ್ರಾರಂಭ, 9 ಗಂಟೆಗೆ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ, ರಾಷ್ಟ್ರಗೀತೆ 9.15 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಜ್ಯೋತ್ಸವ ಸಂದೇಶ, 9.45 ಗಂಟೆಗೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ ಪುರಭವನದಲ್ಲಿ ನಡೆಯುವ ಕಾರ್ಯಕ್ರಮಗಳು ಇಂತಿವೆ : ಮಧ್ಯಾಹ್ನ 3 ಗಂಟೆಗೆ ಪೊಲೀಸ್ ಬ್ಯಾಂಡ್ ಕಾರ್ಯಕ್ರಮ, ಸಂಜೆ 4 ಗಂಟೆಗೆ ಶಾಲಾ ಮಕ್ಕಳಿಂದ ವೈವಿದ್ಯಮಯ ಕಾರ್ಯಕ್ರಮಗಳು ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Comments are closed.