ಕರಾವಳಿ

ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನ : ಗಾಂಜಾ,ನಗದು ಸಹಿತಾ ಆರೋಪಿ ಸೆರೆ

Pinterest LinkedIn Tumblr

ಮಂಗಳೂರು : ನಗರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕಾವೂರು ಠಾಣಾ ಪೊಲೀಸ ಬಂಧಿಸಿದ್ದು, ಆರೋಪಿ ಮಾರಾಟಕ್ಕೆ ತಂದಿದ್ದ ಎನ್ನಲಾದ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಂಜಿಮೊಗರು ನಿವಾಸಿ ಆಶಿರ್ (23) ಬಂಧಿತ ಆರೋಪಿ. ಬಂಧಿತ ಆರೋಪಿ ನಗರದ ಕೂಳೂರು ಸಮೀಪದ ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಶದಲ್ಲಿದ್ದ ಗಾಂಜಾ ಹಾಗೂ ನಗದು ಮತ್ತು ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.