ಕರಾವಳಿ

ಮಹಾನಗರ ಪಾಲಿಕೆ ಚುನಾವಣೆ: ನಾಳೆ ಶಾಲಾ ಕಾಲೇಜು, ಖಾಸಗೀ ಉದ್ಯಮ ಸಂಸ್ಥೆಗಳಿಗೆ ರಜೆ

Pinterest LinkedIn Tumblr

ಮಂಗಳೂರು ನವೆಂಬರ್ 11 : ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಮತದಾರರಿಗೆ ಮತದಾನ ಮಾಡಲು ಅವಕಾಶ ವಾಗುವಂತೆ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಇರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ನವೆಂಬರ್ 12 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಡಲು ಅನುಕೂಲವಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು.

ನೆಗೋಷಿಯೇಬಲ್ ಇನ್ಸ್‍ಟ್ರುಮೆಂಟ್ ಆಕ್ಟ್ 1881 ಪ್ರಕಾರ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.