ಕರಾವಳಿ

ತಮ್ಮ ಧರ್ಮಪತ್ನಿಯೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಶಾಸಕ ಕಾಮತ್

Pinterest LinkedIn Tumblr

ಮಂಗಳೂರು, ನವೆಂಬರ್.12 ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ತಮ್ಮ ಮತವನ್ನು ಚಲಾಯಿಸಿದ್ದಾರೆ.

ನಗರದ ಮಣ್ಣಗುಡ್ಡೆಯ ಗಾಂಧಿನಗರ ಶಾಲೆಯಲ್ಲಿ ಶಾಸಕ ಕಾಮತ್ ಅವರು ತಮ್ಮ ಪತ್ನಿ ವೃಂದಾ ಕಾಮತ್ ಅವರೊಂದಿಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಮತದಾನ ಎನ್ನುವುದು ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಆಯಾ ಕ್ಷೇತ್ರದ ಅಭಿವೃದ್ದಿಯ ದೃಷ್ಟಿಯಲ್ಲಿ ಮಂಗಳೂರಿನ ನಾಗರಿಕರೆಲ್ಲರೂ ತಪ್ಪದೆ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕು. ಪ್ರತಿಯೊಬ್ಬ ಪ್ರಜೆಯೂ ಮತದಾನದಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ಶೇಖಡಾವಾರು ಹೆಚ್ಚಿನ ಫಲಿತಾಂಶ ನೀಡುವಲ್ಲಿ ಶ್ರಮಿಸಬೇಕು ಎಂದು ಈ ಸಂದರ್ಭದಲ್ಲಿ ಶಾಸಕರು ಸಾರ್ವಜನಿಕರಲ್ಲಿ ವಿನಂತಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಎಲ್ಲ 60 ವಾರ್ಡ್’ಗಳಿಗೂ ಅಭ್ಯರ್ಥಿ ನಿಲ್ಲಿಸಿದ್ದು, ನೇರಾನೇರ ಸ್ಪರ್ಧೆ ಇದೆ. ಜೆಡಿಎಸ್ ಈ ಬಾರಿ 12 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಕನಿಷ್ಠ ಐದು ಸ್ಥಾನ ಗೆದ್ದರೂ ಕಿಂಗ್ ಮೇಕರ್ ಆಗುವ ಸಾಧ್ಯತೆಯಿದೆ. ಇದಲ್ಲದೆ, ಎಸ್ ಡಿಪಿಐ ಆರು ಸ್ಥಾನ ಮತ್ತು ಸಿಪಿಐಎಂ ಏಳು ಸ್ಥಾನಗಳಲ್ಲಿ ಸ್ಪರ್ಧೆ ಒಡ್ಡಿದೆ. 27 ಮಂದಿ ಪಕ್ಷೇತರರು ಸೇರಿ ಒಟ್ಟು 180 ಮಂದಿ ಕಣದಲ್ಲಿದ್ದಾರೆ. ಒಟ್ಟು 448 ಮತಗಟ್ಟೆಗಳಿದ್ದು, 3,87,517 ಮತದಾರರು ಮತ ಚಲಾಯಿಸಲಿದ್ದಾರೆ.

Comments are closed.