ಕರಾವಳಿ

ಮನಪಾ ಚುನಾವಣೆ : 20ಕ್ಕೂ ಅಧಿಕ ಮಂಗಳಮುಖಿಯರಿಂದ ಮತದಾನ

Pinterest LinkedIn Tumblr

ಮಂಗಳೂರು, ನವೆಂಬರ್.12: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ 20ಕ್ಕೂ ಅಧಿಕ ಮಂಗಳಮುಖಿಯರು ಮತದಾನ ಮಾಡಿ ಸಂಭ್ರಮಿಸಿದರು.

ಇಂದು ಬೆಳಗ್ಗೆ 7ಗಂಟೆಯಿಂದ ಮತದಾನ ನಿಧಾನಗತಿಯಲ್ಲಿ ಆರಂಭಗೊಂಡಿತ್ತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ್ ಕಾಮಾತ್, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿದಂತೆ ಶಾಸಕರು, ಮಾಜಿ ಶಾಸಕರು ಬೆಳಗ್ಗೆಯೇ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಮತಗಟ್ಟೆಗಳಲ್ಲಿ ಹಕ್ಕು ಚಲಾಯಿಸಿದರು. ಮಿಲಾಗ್ರಿಸ್ ಶಾಲೆಯ 40ನೇ ಬೂತ್ ನಲ್ಲಿ 20ಕ್ಕೂ ಅಧಿಕ ಮಂಗಳಮುಖಿಯರು ಮತದಾನ ಮಾಡಿ ಸಂಭ್ರಮಿಸಿದರು.

ಅನಾರೋಗ್ಯದಿಂದ ಹಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಹಿರಿಯ ಮುಖಂಡ ಸುಧೀರ್ ಘಾಟೆ ಮೂಗಿನ ಹೊಳ್ಳೆಗಳಿಗೆ ಆಕ್ಸಿಜನ್ ಪೈಪ್ ಅಳವಡಿಸಿಕೊಂಡೇ ಮತದಾನ ಮಾಡಿ ಗಮನಸೆಳೆದರು. ಅನಾರೋಗ್ಯದಿಂದ ಬಳಲುತ್ತಿರುವ ಅವರು ಕೊಡಿಯಲ್ ಬೈಲ್ ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. 92 ವರ್ಷದ ಹಿರಿಯ ಮಹಿಳೆ ಯಜಿನಿ.ಕುಲಾಸೊ ತಮ್ಮ ಹಕ್ಕನ್ನು ಚಲಾಯಿಸಿದರು.

Comments are closed.