ಕರಾವಳಿ

ಶಾಂತಿಯುತ ಮತದಾನ : ಮಂಗಳೂರಿನ ಜನತೆಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು, ನವೆಂಬರ್.13 : ಮಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಗೊಂದಲಗಳಿಲ್ಲದೇ, ಶಾಂತಿಯುತವಾಗಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಮತ್ತು ಪರಿಸರ ಸ್ನೇಹಿ ಚುನಾವಣೆ ನಡೆಯಲು ಸಹಕರಿಸಿದ ಮತದಾರರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಸಿಂಧೂ ಬಿ. ರೂಪೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.

ಚುನಾವಣಾ ಸಿದ್ಧತೆಗಳಿಗೆ ಕಾಲಾವಕಾಶ ಕಡಿಮೆ ಇದ್ದರೂ, ಯಾವುದೇ ಲೋಪಗಳಿಲ್ಲದೆ ಚುನಾವಣೆ ನಡೆದಿದೆ. ಇದಕ್ಕಾಗಿ ತೊಡಗಿಸಿಕೊಂಡ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸರಿಗೆ ಧನ್ಯವಾದ ಸಲ್ಲಿಸಿರುವ ಅವರು, ಚುನಾವಣೆ ಸುಗಮವಾಗಲು ಸಹಕರಿಸಿದ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

Comments are closed.