ಕರಾವಳಿ

ನವೆಂಬರ್ 25- 27 :ಲೋಕಾಯುಕ್ತ ಅಧಿಕಾರಿಗಳು ದ.ಕ.ಜಿಲ್ಲೆಗೆ – ದೂರು ಅರ್ಜಿ ಸ್ವೀಕಾರ

Pinterest LinkedIn Tumblr

ಮಂಗಳೂರು :ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ನವೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ. ನವೆಂಬರ್ 26 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ,

ನವೆಂಬರ್ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿ, ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಹಶೀಲ್ದಾರರ ಕಚೇರಿ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ತಹಶೀಲ್ದಾರರ ಕಚೇರಿ.

ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.

ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197, 9886542369, ಪೊಲೀಸ್ ಉಪಾಧೀಕ್ಷಕರ-1 ಕಚೇರಿ-0824-2453420, 8861688100, 9448530051, ಪೊಲೀಸ್ ಉಪಾಧೀಕ್ಷಕರ-2 ಕಚೇರಿ- 0824-2453420, 7026994128, ಪೊಲೀಸ್ ನಿರೀಕ್ಷಕರ ಕಚೇರಿ- 0824-2427237, 9449044377 ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.