ಕರಾವಳಿ

ನಾಳೆ ಕಲ್ಲಡ್ಕದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು, ನವೆಂಬರ್.29 : ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ ಇದರ ವತಿಯಿಂದ, ಶ್ರೀರಾಮ ಪ್ರಥಮ ದರ್ಜೆ ಕಾಲೇಜು, ಕಲ್ಲಡ್ಕ, ಎಂ.ಆರ್.ಪಿ.ಎಲ್, ಮಂಗಳೂರು, ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಮಹಿಮಾ ಪೌಂಡೇಶನ್ (ರಿ), ಬಂಟ್ವಾಳ ಇವರುಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 9.30 ರಿಂದ 4.30 ಗಂಟೆವರೆಗೆ ಜಿಲ್ಲಾಮಟ್ಟದ “ಉದ್ಯೋಗ ಮೇಳ”ವನ್ನು ಶ್ರೀರಾಮ ಪ್ರಥಮ ದರ್ಜೆ ಕಾಲೇಜು, ಕಲ್ಲಡ್ಕ ಬಂಟ್ವಾಳ ತಾಲೂಕು ಇಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸುಮಾರು 50ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿರುವರು.

ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಪದವಿ, ಬಿ.ಎಡ್, ಡಿ.ಫಾರ್ಮ, ಬಿ. ಫಾರ್ಮ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಹಾಗೂ ಡ್ರೈವರ್ ಆಗಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Comments are closed.