ಕರಾವಳಿ

ಡಿ.02-03: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ನಾಗಭರಣ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು, ಡಿಸೆಂಬರ್.01: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ನಾಗಭರಣ ಅವರು ಡಿಸೆಂಬರ್ 2 ಹಾಗೂ 3 ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.

ಡಿಸೆಂಬರ್ 2 ರಂದು ಬೆಳಿಗ್ಗೆ 10.05 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಹಾಗೂ ಮಧ್ಯಾಹ್ನ 3 ಗಂಟೆಗೆ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

 

ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಕನ್ನಡ ಪರ ಸಂಘಟನೆಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 12.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ರಾತ್ರಿ 9.35 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Comments are closed.