ಮಂಗಳೂರು, ಡಿಸೆಂಬರ್.01 : ಲಾರಿ ಹಾಗೂ ಆಟೋ ಮಧ್ಯೆ ಉಂಟಾದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಬಾನುವಾರ ಕದ್ರಿ ಕಂಬ್ಳ ರಸ್ತೆಯಲ್ಲಿ ಸಂಭವಿಸಿದೆ.
ಮೃತ ಶಿಕ್ಷಕಿಯನ್ನು ಶೈಲಜಾ ರಾವ್ ಎಂದು ಗುರುತಿಸಲಾಗಿದ್ದು, ಇವರು ಪಣಂಬೂರಿನ ಕೇಂದ್ರಿಯ ವಿದ್ಯಾಲಯ ಶಾಲೆಯ ಶಿಕ್ಷಕಿಯಾಗಿದ್ದರು. ಶೈಲಜಾರವರು ನಗರದ ಕದ್ರಿ ಕಂಬ್ಳ ನಿವಾಸಿ ಎಂದು ತಿಳಿದು ಬಂದಿದೆ.
ಇವರು ಪಣಂಬೂರ್‌ನಿಂದ ತಮ್ಮ ಮನೆಗೆ ಅಟೋ ರಿಕ್ಷಾದಲ್ಲಿ ಬರುತ್ತಿದ್ದಾಗ ಕದ್ರಿ ಕಂಬ್ಳದಲ್ಲಿರುವ ತಮ್ಮ ಮನೆಯ ಸಮೀಪವೇ ಆಟೋ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಈ ವೇಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಅತನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದೆ ಎಂದು ಹೇಳಲಾಗಿದೆ.
ಈ ಕುರಿತು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Comments are closed.