ಕರಾವಳಿ

ಪಣಂಬೂರು : ಇಬ್ಬರು ಗಾಂಜಾ ವ್ಯಸನಿಗಳ ಬಂಧನ-NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು

Pinterest LinkedIn Tumblr

ಮಂಗಳೂರು : ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಗ್ರಾಮದ ಚನಲ್ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಉತ್ತರ ಉಪವಿಭಾಗದ ವಿಶೇಷ ಅಪರಾಧ ಪತ್ತೆದಳ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮುಕ್ಕದ ಮೊಹಮ್ಮದ್ ರಾಜಿಕ್ ಯಾನೆ ರಾಜಿಕ್ (32) ಹಾಗೂ ಸುರತ್ಕಲ್ ಚೆಳ್ಯಾರಿನ ನಿಖಿಲ್ (19) ಎಂದು ಹೆಸರಿಸಲಾಗಿದೆ.

ದಿನಾಂಕ 07.12.2019 ರಂದು ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಗ್ರಾಮದ ಚನಲ್ ಎಂಬಲ್ಲಿ ಸಮಾಜದಲ್ಲಿ ನಿಷೇಧಿಸಲ್ಪಟ್ಟ ಮಾದಕ ದ್ರವ್ಯ ಗಾಂಜಾವನ್ನು ಸೇವಿಸುತ್ತಿರುವುದಾಗಿ ಮಂಗಳೂರು ನಗರ ಉತ್ತರ ಉಪವಿಭಾಗದ ಎಸಿಪಿ ಶ್ರೀ ಶ್ರೀನಿವಾಸ ಗೌಡ ಆರ್.(ಐಪಿಎಸ್) ನೇತೃತ್ವದ ರೌಡಿ ನಿಗ್ರಹ ದಳಕ್ಕೆ ದೊರೆತ ಖಚಿತ ವರ್ತಮಾನದಂತೆ ಕಾರ್ಯಚರಣೆ ನಡೆಸಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಆರೋಪಿಗಳ ವಿರುದ್ಧ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರದ ಪೊಲೀಸು ಆಯುಕ್ತರಾದ ಡಾ: ಪಿ.ಎಸ್, ಹರ್ಷ ಐ.ಪಿ.ಎಸ್. ಇವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಉಪ-ಆಯುಕ್ತರಾದ ಅರುಣಾಂಶು ಗಿರಿ ಹಾಗೂ ಲಕ್ಮೀ ಗಣೇಶ್ ಇವರ ಮಾರ್ಗದರ್ಶನದಂತೆ ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀನಿವಾಸ ಗೌಡ ಆರ್ ಇವರ ನೇತೃತ್ವದಲ್ಲಿ ನಡೆದ ಪತ್ತೆ ಕಾರ್ಯಾಚರಣೆಯಲ್ಲಿ ಪಣಂಬೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಅಜ್ಮತ್ ಅಲಿ ಮತ್ತು ಪೊಲೀಸ್ ಉಪನಿರೀಕ್ಷಕರಾದ ಕುಮಾರೇಶನ್ ಹಾಗೂ ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳದ ಅಧಿಕಾರಿ/ಸಿಬ್ಬಂದಿಗಳಾದ ಮೊಹಮ್ಮದ್, ಎ.ಎಸ್.ಐ ಕುಶಲ ಮಣಿಯಾಣಿ, ಸತೀಶ್ ಎಂ. ಇಸಾಕ್ , ಶರಣ್ ಕಾಳಿ ಮತ್ತು ಪಣಂಬೂರು ಪೊಲೀಸರು ಭಾಗವಹಿಸಿದ್ದರು.

Comments are closed.