ಕರಾವಳಿ

ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವತಿ : ಕಾರು ತಡೆದ ಸಾರ್ವಜನಿಕರು – ಯುವಕ ಪರಾರಿ

Pinterest LinkedIn Tumblr

ಮಂಗಳೂರು, ಡಿಸೆಂಬರ್.13 : ಕಾರಿನಲ್ಲಿ ಯುವತಿಯೋರ್ವಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಕುಳಾಯಿಯಲ್ಲಿ ನಿನ್ನೆ ಸಂಜೆ ನಡೆದಿದೆ.

ನಗರದ ಹೊರವಲಯ ಕುಳಾಯಿಯಲ್ಲಿ ಕಾರಿನ ಮುಂಭಾಗದ ಸೀಟಿನೊಳಗೆ ಯುವತಿಯೋರ್ವಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ಕಂಡ ಇತರ ವಾಹನ ಸವಾರರು ಹಾಗೂ ಸಾರ್ವಜನಿಕರು ಕಾರನ್ನು ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಆದರೆ ಕಾರು ನಿಲ್ಲಿಸದಿದ್ದಾಗ ಅನುಮಾನಗೊಂಡು ಸಾರ್ವಜನಿಕರು ಕಾರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭ ಕಾರಿನಲ್ಲಿದ್ದ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ಕಾರು ಚಾಲಕ ಹಾಗೂ ಯುವತಿ ಸ್ನೇಹಿತರು ಅನ್ನುವ ವಿಚಾರ ಬೆಳಕಿಗೆ ಬಂದಿದೆ. ಆದರೆ ಯುವತಿ ಯಾವ ಕಾರಣಕ್ಕಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ. ಸುರತ್ಕಲ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.