ಮಂಗಳೂರು, ಡಿಸೆಂಬರ್.18 : ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಗಳೂರು ಆಯ್ಕೆಯಾಗಿರುವುದು ನಮಗೆಲ್ಲರಿಗೂ ಆನಂದದ ವಿಚಾರವಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹರ್ಷ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ ಅವರು, ಬೆಳೆಯುತ್ತಿರುವ ಮಂಗಳೂರಿಗೆ ಸೂಕ್ತವಾದ ಯೋಜನೆಯೊಂದನ್ನು ನೀಡುವ ಮೂಲಕ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯನ್ನು ಮಂಗಳೂರಿಗೆ ತರಲು ಹಗಲಿರುಳು ಶ್ರಮಿಸಿದ ಸಂಸದರಾದ ಶ್ರೀ ನಳಿನ್ ಕುಮಾರ್‌ಕಟೀಲ್ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.
ಈಗಾಗಲೇ ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ಅನೇಕ ಕಾಮಗಾರಿಗಳು ಪ್ರಾರಂಭಗೊಂಡಿದೆ. ಹಾಗೂ ಇನ್ನು ಕೆಲವೊಂದು ಕಾಮಗಾರಿಗಳು ಪ್ರಗತಿಯ ಹಂತದಲ್ಲಿದೆ. ಉಳಿದ ಕಾಮಗಾರಿಗಳಿಗೂ ವೇಗ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಒಳಗೊಂಡಿರುವ ಮಂಗಳೂರು ನಗರ ದಕ್ಷಿಣದ ಎಲ್ಲಾ ವಾರ್ಡುಗಳಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾಮಗಾರಿಗೆ ಮತ್ತಷ್ಟು ವೇಗ ನೀಡಲಾಗುವುದು. ಪ್ರಸ್ತಾಪಿತ ಕಾಮಗಾರಿಯಲ್ಲಿ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ ಸೂಕ್ತ ರೀತಿಯಲ್ಲಿ ಫುಟ್‌ಪಾತ್ ನಿರ್ಮಿಸಿ, ಅಲಂಕಾರಿಕ ದೀಪಗಳನ್ನು ಅಳವಡಿಸಲಾಗುವುದು ಎಂದು ಶಾಸಕರು ಕಾಮಗಾರಿಗಳ ಬಗ್ಗೆ ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿಪಕ್ಷದ ಮುಖಂಡರಾದ ವಸಂತ್ ಪೂಜಾರಿ, ಶ್ರೀನಿವಾಸ್ ಶೇಟ್, ಗುರುಚರಣ್ ಮುಂತಾದವರು ಉಪಸ್ಥಿತರಿದ್ದರು

Comments are closed.