ಮಂಗಳೂರು, ಡಿಸೆಂಬರ್. 20 : ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪ್ರತಿಭಟನಕಾರರು ಹಿಂಸಾಚರದಲ್ಲಿ ತೊಡಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಸಂಜೆ ಬಂದರು ಠಾಣೆಗೆ ಬೆಂಕಿ ಹಚ್ಚಲು ಮುಂದಾದ ಉದ್ರಿಕ್ತರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದ ಸಂದರ್ಭ ಪೊಲೀಸರ ಗುಂಡು ತಗುಲಿ ಆಸ್ಪತ್ರೆ ಸೇರಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮುಸ್ಲಿಂ ಧಾರ್ಮಿಕ ಮುಖಂಡರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಹಿರಂಗಗೊಂಡಿದೆ.
ನಗರದಲ್ಲಿ ಸಂಜೆ ಕರೆದ ಪತ್ರಿಕಾಗೋಷ್ಠ್ಯಿಯಲ್ಲಿ ಮಾತನಾಡಿದ ಮುಸ್ಲಿಂ ಧಾರ್ಮಿಕ ಮುಖಂಡರು ಬಂದರು ಠಾಣಾ ವ್ಯಾಪ್ತಿಯಲ್ಲಿ ತೀವ್ರ ಸ್ವರೂಪದಲ್ಲಿ ಹಿಂಸಾಚಾರ ನಡೆದಿದ್ದು, ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಪೊಲೀಸರ ಗುಂಡಿಗೆ ಬಲಿಯಾದವರನ್ನು ಬೆಂಗ್ರೆ ನಿವಾಸಿ ನೌಶೀನ್ (23) ಹಾಗೂ ಕಂದಕ್ ನಿವಾಸಿ ಜಲೀಲ್(49) ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡ ಹಾಗೂ ಮಾಜಿ ಶಾಸಕ ಮೊಹಮ್ಮದ್ ಮಸೂದ್ ಕುದ್ರೋಳಿ ಅವರು, ಮೃತಪಟ್ಟವರ ಕುಟುಂಬಕ್ಕೆ ಸರಕಾರ ಸೂಕ್ತ ಪರಿಹಾರವನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಅಲ್ಲದೆ, ಎಲ್ಲಾ ಮುಸ್ಲಿಂ ಸಂಘಟನೆಯವರು ನಗರದಲ್ಲಿ ಶಾಂತಿ ಕಾಪಾಡಬೇಕು. ಯಾವುದೇ ಕಾರಣಕ್ಕೂ ಯಾವುದೇ ಸಂಘಟನೆ ಯಾಗಲಿ, ಜನತೆಯಾಗಲಿ ಕಾನೂನಿನ ವಿರುದ್ಧ ನಡೆದುಕೊಳ್ಳಬಾರದು. ಶಾಂತಿಯುತವಾಗಿ ಇದ್ದುಕೊಂಡು ಮಂಗಳೂರು ನಗರದ ಪೊಲೀಸರೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಫುಟ್ ಬಾಲ್ ಎಸೋಸಿಯೇಸಯನ್ಸ್ ಅಧ್ಯಕ್ಷ ಡಿ.ಎಂ. ಅಸ್ಲಾಂ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.
Comments are closed.