ನಗರದ ಜನತೆ ಶಾಂತಿ ಕಾಪಾಡುವಂತೆ ಸಚಿವ ಪೂಜಾರಿ ಮನವಿ
ಮಂಗಳೂರು, ಡಿಸೆಂಬರ್.20 : ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ನಗರದಲ್ಲಿ ನಡೆದಿರುವ ಗಲಭೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾರು ಕೂಡ ವದಂತಿಗಳಿಗೆ ಕಿವಿಕೊಡದೆ ಶಾಂತಿ ಕಾಪಾಡುವಂತೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಗರೀಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಕರ್ನಾಟಕಕ್ಕೆ ಯಾವುದೇ ಆತಂಕವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆಯಿಂದ ಇದ್ದಂತಹ ಇತಿಹಾಸವಿದೆ. ಆದ್ದರಿಂದ ಎಲ್ಲರೂ ಶಾಂತಿ ಸುವ್ಯವಸ್ಥೆಯಿಂದ ಬಾಳಬೇಕು ಎಂದು ಸಚಿವರು ಹೇಳಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಮಹಾನಗರದ ಜನತೆ ಶಾಂತಿಯನ್ನು ಕಾಪಾಡಬೇಕು. ಶಾಂತಿ ಸುವ್ಯವಸ್ಥೆ, ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಬೇಕು. ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಾಗೂ ಎಚ್ಚರಿಕೆಯ ಹೆಜ್ಜೆ ಇಡುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
Comments are closed.