ಕರಾವಳಿ

ಗೋಲಿಬಾರ್‌ಗೆ ಬಲಿಯಾದ ಜಲೀಲ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ : 7.5 ಲಕ್ಷ ರೂ.ನ ಚೆಕ್ ವಿತರಣೆ

Pinterest LinkedIn Tumblr

ಮಂಗಳೂರು, ಡಿಸೆಂಬರ್.23: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಗೋಲಿಬಾರ್‌ಗೆ ಬಲಿಯಾದ ಬಂದರ್ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಝಮೀರ್ ಅಹ್ಮದ್ ಅವರ ಜೊತೆ ಸೋಮವಾರ ಮಧ್ಯಾಹ್ನ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ 2.5 ಲಕ್ಷ ರೂ.ಸೇರಿದಂತೆ ಸುಮಾರು 7.5 ಲಕ್ಷ ರೂ.ನ ಚೆಕ್ ಅನ್ನು ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರಿಸಿದರು.

ಈ ವೇಳೆ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಶಾಸಕ ಹರೀಶ್ ಕುಮಾರ್, ಕಾರ್ಪೊರೇಟರ್‌ ಗಳಾದ ಪ್ರವೀಣ್‌ಚಂದ್ರ ಆಳ್ವ, ವಿನಯರಾಜ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಜಿ.ಎ.ಬಾವ, ಲತೀಫ್ ಕಂದಕ್, ಡಿ.ಎಂ.ಅಸ್ಲಂ ಮತ್ತಿತರರು ಉಪಸ್ಥಿತರಿದ್ದರು.

Comments are closed.