ಕರಾವಳಿ

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ- ಕೆ.ಎಂ.ಸಿ ವೈದ್ಯರ ಹೇಳಿಕೆ

Pinterest LinkedIn Tumblr

ಉಡುಪಿ: ಅನಾರೋಗ್ಯದಿಂದ ಬಳಲಿ ಉಡುಪಿಯ ಮಣಿಪಾಲ‌ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಸ್ವಾಮೀಜಿಯವರ ಆರೋಗ್ಯ ಸ್ಥಿತಿಯು ತೀರಾ ಗಂಭೀರವಾಗಿದ್ದು ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಅವರು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಸಹಾಯದಲ್ಲಿ ಇದ್ದಾರೆ. ಅವರ ದೇಹ ಸ್ಥಿತಿಯಲ್ಲಿ ನಿನ್ನೆಯಿಂದ ಇಳಿಮುಖವಾಗಿದೆ ಎಂದು ಮಣಿಪಾಲ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Comments are closed.