ಕರಾವಳಿ

ಶಾಸಕ ಕಾಮತ್ ಅವರಿಂದ ನೆರೆಹಾನಿಗೀಡಾದ ಕುಟುಂಬಕ್ಕೆ ಪರಿಹಾರ ವಿತರಣೆ

Pinterest LinkedIn Tumblr

ಮಂಗಳೂರು : ಮಂಗಳೂರಿನಲ್ಲಿ ಕಳೆದ ಬಾರಿ ಸುರಿದ ಧಾರಾಕಾರ ಮಳೆಯಿಂದ ಹಾನಿಗೀಡಾದ ಕುಟುಂಬಕ್ಕೆ ಪರಿಹಾರದ ಚೆಕ್ಕನ್ನು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ವಾರ್ಡಿನ ಫಿಲಿಪ್ ಲೋಬೋ ಅವರಿಗೆ 95 ಸಾವಿರ ರೂಪಾಯಿಯ ಚೆಕ್ಕನ್ನು ವಿತರಿಸಲಾಯಿತು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದೆ. ನಷ್ಟ ಅನುಭವಿಸಿದ ಕುಟುಂಬಗಳಿಗೆ ಸರಕಾರದಿಂದ ಪರಿಹಾರ ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈಗಾಗಲೇ ವಿವಿಧ ಕಡೆಗಳಲ್ಲಿ ನೆರೆಯಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡಲಾಗಿದ್ದು, ಬಾಕಿ ಉಳಿದಿರುವ ಕುಟುಂಬಗಳಿಗೂ ಪರಿಹಾರ ಒದಗಿಸಲು ಪ್ರಯತ್ನಪಡುತ್ತೇನೆ. ನೆರೆಹಾನಿಯ ಬಗ್ಗೆ ವಿಶೇಷ ಕಾಳಜಿ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪರಿಹಾರ ನಿಧಿಯ ಮೊತ್ತವನ್ನು ಏರಿಸುವ ಮೂಲಕ ಜನರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಿಗೆ ನನ್ನ ಕ್ಷೇತ್ರದ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಈ ಸಂಧರ್ಭದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಶೈಲೇಶ್ ಶೆಟ್ಟಿ, ವನಿತಾ ಪ್ರಸಾದ್,ಬಿಜೆಪಿ ಮುಖಂಡರಾದ ಸುಜನ್ ದಾಸ್,ಪುರುಷೋತ್ತಮ ಭಟ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.