ಕರಾವಳಿ

ಮಂಗಳೂರು : ಜ. 6, 7 ಮತ್ತು 8 ರಂದು “ಮತದಾರರ ಮಿಂಚಿನ ನೋಂದಣಿ ಅಭಿಯಾನ” – ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು ಜನವರಿ 04 : ಭಾರತ ಚುನಾವಣಾ ಆಯೋಗವು 2020ನೇ ಜನವರಿ 1 ರಂದು 18 ವರ್ಷ ಪ್ರಾಯ ತುಂಬಿದ ಜಿಲ್ಲೆಯ ಸಾಮಾನ್ಯ ನಿವಾಸಿಯಾಗಿದ್ದು, ಮತದಾರರ ಪಟ್ಟಿಯಲ್ಲಿ ಈ ತನಕ ಹೆಸರು ನೋಂದಾಯಿಸದೇ ಇರುವ ವಿಕಲಚೇತನರು, ಮಹಿಳೆಯರು, ದುರ್ಬಲರು ಯುವ ಮತ್ತು ಬಿಟ್ಟು ಹೋದ ಮತದಾರರ ಅನುಕೂಲಕ್ಕಾಗಿ ‘ಮಿಂಚಿನ ನೊಂದಣಿ’ ಅಭಿಯಾನವನ್ನು ಜನವರಿ 6, 7 ಮತ್ತು 8 ರವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದೆ. ನೋಂದಣಿ ಅಭಿಯಾನವು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ.

ಮತದಾರರ ಮಿಂಚಿನ ನೋಂದಣೆ ಅಭಿಯಾನಕ್ಕೆ ಅಗತ್ಯವಿರುವ ದಾಖಲೆಗಳು: ವಯಸ್ಸಿನ ಬಗ್ಗೆ ದಾಖಲೆಗಳು- ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡು, ಪಾಸ್ ಪೋರ್ಟ್, ಎಸ್.ಎಸ್.ಎಲ್.ಸಿ/ಪಿ.ಯು.ಸಿ ಅಂಕಪಟ್ಟಿಗಳು, ಪಾನ್ ಕಾರ್ಡು ಹಾಗೂ ವೈದ್ಯಕೀಯ ಪ್ರಮಾಣ ಪತ್ರ. ವಾಸಸ್ಥಳದ ಬಗ್ಗೆ ದಾಖಲೆಗಳು- ಪಡಿತರ ಚೀಟಿ, ಆಧಾರ್ ಕಾರ್ಡು, ರಹವಾಸಿ ಪತ್ರ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಷೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಎರಡು ಪಾಸ್ ಪೋರ್ಟು ಅಳತೆಯ ಭಾವಚಿತ್ರಗಳು.

ಯಾವುದಕ್ಕೆ ಯಾವ ಅರ್ಜಿ : ನಮೂನೆ- 6, 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವ ಅರ್ಜಿ. ನಮೂನೆ-6ಎ, ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡುವ ಅರ್ಜಿ. ನಮೂನೆ-7, ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವ ಅರ್ಜಿ. ನಮೂನೆ-8, ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು ಬಳಸುವ ಅರ್ಜಿ. ನಮೂನೆ-8ಎ, ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿ.

ಸಾರ್ವಜನಿಕರು ಮಿಂಚಿನ ನೊಂದಣಿ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನದ ಪ್ರಯೋಜನ ಪಡೆಯುವಂತೆ ದ.ಕ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.