ಕರಾವಳಿ

ಕದ್ರಿ ಉದ್ಯಾನವನ : ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು ಜನವರಿ 07 :ತೋಟಗಾರಿಕೆ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಜನವರಿ 24 ರಿಂದ 26 ರವರೆಗೆ ನಡೆಯಲಿದೆ.

ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.

ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುವುದು, ಸ್ವಸಹಾಯ ಗುಂಪುಗಳು, ಸ್ತ್ರೀಶಕ್ತಿ ಸಂಘಗಳು ತಮ್ಮ ಉತ್ಪಾದಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಮಳಿಗೆ ತೆರೆಯಲು ಆಸಕ್ತರು ಜನವರಿ 18 ರೊಳಗೆ ಹೆಸರು ನೋಂದಾವಣಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೊಂದಾಯಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣ ಬೆಂದೂರು, ಮಂಗಳೂರು ದೂರವಾಣಿಸಂಖ್ಯೆ 9845523944 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.