ಕರಾವಳಿ

ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ : ವಿವಾದಕ್ಕೆ ತೆರೆ ಎಳೆದ ಸಚಿವ ಪೂಜಾರಿ

Pinterest LinkedIn Tumblr

ಮಂಗಳೂರು: ವಿವಾದಗಳ ಮೂಲಕ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವ ಉಡುಪಿ ಪುರಭವನದಲ್ಲಿ ಜ.11 ರಂದು ಹಮ್ಮಿಕೊಳ್ಳಲಾಗಿರುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಉಡುಪಿ ಪುರಭವನದಲ್ಲಿ ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದಾರೆ ಎಂಬ ಬಗ್ಗೆ ಸಂದೇಶಗಳು ಹರಿದಾಡುತ್ತಿದ್ದವು. ಅಲ್ಲದೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿತ್ತು. ಈ ಬಗ್ಗೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ತಾನು ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ. ಅಲ್ಲದೆ ಆ ಕಾರ್ಯಕ್ರಮಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ವಿವಾದಗಳ ಮೂಲಕ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವ ಈ ಕಾರ್ಯಕ್ರಮದಲ್ಲಿ ತಾನು ಭಾಗವಹಿಸುತ್ತಿದ್ದೇನೆ ಎಂಬ ಸಂದೇಶ ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಹಿಂದೆಯೇ ನಿರ್ಧಾರವಾದಂತೆ ಜನವರಿ 11ರಂದು ತಾನು ಶಿವಮೊಗ್ಗ ಜಿಲ್ಲೆಯ ಪ್ರವಾಸದಲ್ಲಿದ್ದು, ಇಲಾಖಾ ಪ್ರಗತಿ ಪರಿಶೀಲನೆ ಮತ್ತು ಅರ್ಚಕರ ಸಮಾವೇಶ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ಬಿಲ್ಲವ – ಮುಸ್ಲಿಂ ಸಮಾವೇಶದ ಬಗ್ಗೆ ನನಗೆ ಯಾವೂದೇ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.

ನಿಂದಿಸುವ ವಾಯ್ಸ್ ಮೆಸೇಜ್ ಜಲತಾಣಗಳಲ್ಲಿ ವೈರಲ್ :

ಈ ನಡುವೆ ಈ ಸಮಾವೇಶವನ್ನು ಕಾಂಗ್ರೆಸ್ ಮುಖಂಡರು ಹಮ್ಮಿಕೊಂಡಿದ್ದಾರೆ ಎಂದು ಹೇಳಲ್ಲಾಗಿದ್ದು, ಕಾರ್ಯಕ್ರಮದ ಪ್ರಮುಖ ಸಂಘಟಕರು ಎಂದು ಹೇಳಲಾಗಿರುವ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ್ ತೋನ್ಸೆ ಹಾಗೂ ದಿನೇಶ್ ಅಮೀನ್ ಮಟ್ಟು ಇವರ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಆಕ್ರೋಷ ವ್ಯಕ್ತವಾಗಿದೆ. ಮಾತ್ರವಲ್ಲದೇ ಬಿಲ್ಲವ ಸಂಘಟನೆಯ ಪ್ರಮುಖರು ಎನ್ನಲಾದ ಕೆಲವರು ದೂರವಾಣಿ ಕರೆ ಮಾಡಿ ಈ ಮೂವರನ್ನು ನಿಂದಿಸುವ ವಾಯ್ಸ್ ಮೆಸೇಜ್ ಜಲತಾಣಗಳಲ್ಲಿ ವೈರಲ್ ಆಗುತ್ತಿದೆ.

Comments are closed.