ಕರಾವಳಿ

ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ತಿರಸ್ಕರಿಸಿ ಹಾಗೂ ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಜನವರಿ, 11: ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ತಿರಸ್ಕರಿಸಿ ಮತ್ತು ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಟೌನ್ ಹಾಲ್ ಮುಂಭಾಗ ಶನಿವಾರ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಬ್ಲ್ಯೂಐಎಂ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಂ ಅವರು, ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ಜಾರಿಗೆ ಅಗತ್ಯವಿಲ್ಲ ಎಂದು ಹೇಳಿದ ಅವರು, ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಡಬ್ಲ್ಯೂಐಎಂ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಸಾಮಾಜಿಕ‌ ಹೋರಾಟಗಾರ್ತಿ ನಝ್ಮಾ, ಲೇಖಕಿ ಜ್ಯೋತಿ ಗುರುಪ್ರಸಾದ್, ಎನ್‌ಡಬ್ಯುಎಫ್ ರಾಷ್ಟ್ರೀಯ ಸಮಿತಿ ಸದಸ್ಯೆ ದಿಲ್‌ದಾರ್, ಎಸ್ಕೆಎಸ್ಸೆಂನ ಮುಝಾಹಿದಾ, ಸಿಎಫ್‌ಐನ ಅಮ್ರೀನ್‌, ಲೇಖಕಿ ನಝ್ಮಾ ನಝೀರ್ ಮತ್ತಿತರರು ಪಾಲ್ಗೊಂಡಿದ್ದರು. ರಮ್ಲತ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು.

Comments are closed.