ಕರಾವಳಿ

ಲೋಕಾಯುಕ್ತ ಅಧಿಕಾರಿಗಳಿಂದ ದ.ಕ.ಜಿಲ್ಲೆಯ ವಿವಿದೆಡೆ ಪ್ರವಾಸ : ದೂರು ಅರ್ಜಿ ಸ್ವೀಕಾರ

Pinterest LinkedIn Tumblr

ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ.

ಹಾಗೂ ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ ನೀಡಬಹುದಾಗಿದೆ.

ಜನವರಿ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಹಶೀಲ್ದಾರರ ಕಚೇರಿ, 3 ರಿಂದ ಸಂಜೆ 5 ಗಂಟೆಯ ವರೆಗೆ ಮಂಗಳೂರು ತಹಶೀಲ್ದಾರರ ಕಚೇರಿ, ಜನವರಿ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಸುಳ್ಯ ತಾಲೂಕು ಕಚೇರಿ, ಜನವರಿ 29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯ ವರೆಗೆ ಬಂಟ್ವಾಳ ತಾಲೂಕು ಕಚೇರಿ, ಜನವರಿ 30 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಕಡಬ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದು.

ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಚೇರಿ, 0824 – 24291997, 9945900778, ಪೊಲೀಸ್ ಉಪಾಧೀಕ್ಷಕರು-1 ಕಛೇರಿ, 0824 – 2453420, 8861688100, 9448530051 ಸಂಪರ್ಕಿಸಲು ಪೊಲೀಸು ಅಧೀಕ್ಷಕರರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.