ಕರಾವಳಿ

ಜನವರಿ 21ರಂದು ವಿವಿ ಸಂಧ್ಯಾ ಕಾಲೇಜಿನಲ್ಲಿ ತುಳು ವಿಶೇಷ ಉಪನ್ಯಾಸ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು :ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮಂಗಳೂರು ಇವುಗಳ ಸಹಯೋಗದಲ್ಲಿ ತುಳು ಜನಪದ ಸಾಹಿತ್ಯ ಕುರಿತಂತೆ ಸಂಜೆ 6 ಗಂಟೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ನಡೆಯುವ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪಗೌಡ ಉಪನ್ಯಾಸವನ್ನು ನೀಡಲಿದ್ದು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ರಾಮಕೃಷ್ಣ ಬಿ.ಎಂ., ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ.ಮಾಧವ ಎಂ.ಕೆ ಭಾಗವಹಿಸಲಿದ್ದಾರೆ ಎಂದು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ರಾಮಕೃಷ್ಣ ಬಿ.ಎಂ. ಇವರ ಪ್ರಕಟಣೆ ತಿಳಿಸಿದೆ.

Comments are closed.