ಕರಾವಳಿ

ದಕ್ಷಿಣ ಶಾಸಕರ ಮೆಚ್ಚುಗೆಗೆ ಪಾತ್ರವಾದ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ

Pinterest LinkedIn Tumblr

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು, ನೀರುಮಾರ್ಗ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನೀರುಮಾರ್ಗ ಗ್ರಾಮ ಪಂಚಾಯತ್‍ನಲ್ಲಿ ಜನವರಿ 13 ಮತ್ತು 14 ರಂದು ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಶಿಬಿರವನ್ನು ಉದ್ಘಾಟಿಸಿದರು. ಸಹಾಯಕ ಅಂಚೆ ಅಧೀಕ್ಷಕ ಪ್ರಾಸ್ತಾವಿಕ ಮಾತನಾಡಿ ಶಿಬಿರದ ಸದುಪಯೋಗ ಪಡೆಯುವಂತೆ ಹಾಗೂ ಅಂಚೆ ಇಲಾಖೆಯ ಇತರ ಸೇವೆಗಳ ಉಪಯೋಗವನ್ನು ಪಡೆಯುವಂತೆ ಹೇಳಿದರು.

ದಕ್ಷಿಣ ಶಾಸಕ ಡಾ. ಭರತ್ ಶೆಟ್ಟಿ ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಬಿರದಲ್ಲಿ 528 ನಾಗರಿಕರು ಇದರ ಸದುಪಯೋಗ ಪಡೆದುಕೊಂಡಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು , ಉಪಾಧ್ಯಕ್ಷರು, ಸರ್ವಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Comments are closed.