ಕರಾವಳಿ

ಫೆಬ್ರವರಿಯಿಂದ ರಾಷ್ಟ್ರೀಯ ಲೋಕ ಅದಲಾತ್ : ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಪರಿಹಾರ ಪಡೆದುಕೊಳ್ಳಲು ಸುವರ್ಣಾವಕಾಶ

Pinterest LinkedIn Tumblr

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆವರಣಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯದ ಬೈಟಕ್‍ ಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ದ.ಕ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಸಿವಿಲ್, ಕ್ರಿಮಿನಲ್, ಮೋಟಾರ್ ವಾಹನಗಳ ಅಪಘಾತ ಪ್ರಕರಣಗಳ ವಿಲೇವಾರಿಗಾಗಿ ಕ್ರಮ ಕೈಗೊಳ್ಳಲಾಗಿರುತ್ತದೆ ಮಾತ್ರವಲ್ಲದೇ ವಿವಿಧ ಬ್ಯಾಂಕ್‍ಗಳ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ.

2020ನೇ, ಫೆಬ್ರವರಿ 8, ಎಪ್ರಿಲ್ 11, ಜುಲೈ 11, ಸಪ್ಟೆಂಬರ್ 12 ಮತ್ತು ಡಿಸೆಂಬರ್ 12 ರಂದು ರಾಷ್ಟ್ರೀಯ ಲೋಕ ಅದಲಾತ್ ನಡೆಯಲಿದ್ದು, ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ರಾಷ್ಟ್ರೀಯ ಲೋಕ ಅದಲಾತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳು ಇಂತಿವೆ : ವ್ಯಾಜ್ಯ ಪೂರ್ವ ಪ್ರಕರಣಗಳು : ಚೆಕ್ಕು ಅಮಾನ್ಯದ ಪ್ರಕರಣಗಳು u/s 138, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು ((non compoundable ಹೊರತುಪಡಿಸಿ), ಮೈನ್‍ಟೆನೆನ್ಸ್ ಪ್ರಕರಣಗಳು (Maintenance Cases), ಇತರ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು).

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು : ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು u/s 138, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು ((non compoundable ಹೊರತುಪಡಿಸಿ), ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳಿಗೆ (ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕದ್ದಮೆಗಳು)ಶೀಘ್ರ ಪರಿಹಾರ ದೊರಕಲಿದೆ.
ಹೆಚ್ಚಿನ ಮಾಹಿತಿಗಾಗಿ ನ್ಯಾಯ ಸಂಯೋಗ, ಕಾನೂನು ನೆರವು ಘಟಕ (ಬಹುವಿಧ ಸೇವೆಗಳು ಒಂದೇ ಸೂರಿನ ಅಡಿಯಲ್ಲಿ) ‘ನ್ಯಾಯ ದೇಗುಲ’,

ಮೊದಲನೆ ಮಹಡಿ, ಹೆಚ್.ಸಿದ್ಧಯ್ಯ ರಸ್ತೆ, ಬೆಂಗಳೂರು-560027, ದೂರವಾಣಿ ಸಂಖ್ಯೆ: 080-22111730, ವೆಬ್‍ಸೈಟ್: www.kslsa.kar.nic.in, ಸಹಾಯವಾಣಿ ಸಂಖ್ಯೆ: 1800-425-90900 ನ್ನು ಸಂಪರ್ಕಿಸಬಹುದು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Comments are closed.