ಕರಾವಳಿ

ಉಡುಪಿಯ ಬ್ಯಾಂಕ್’ನಲ್ಲಿ ಬಾಂಬರ್ ಆದಿತ್ಯ ರಾವ್ ಸೇಫ್ ಲಾಕರ್: ಉಡುಪಿಗೆ ಕರೆತಂದ ಪೊಲೀಸರು!

Pinterest LinkedIn Tumblr

ಉಡುಪಿ: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ನನ್ನು ಪೊಲೀಸರು ಶನಿವಾರ ಉಡುಪಿ ಬ್ಯಾಂಕ್ ಗೆ ಕರೆತಂದು ಪರಿಶೀಲನೆ ನಡೆಸಿದ್ದಾರೆ.

ಮೂಲತಃ ಉಡುಪಿಯ ಮಣಿಪಾಲದ ಆರೋಪಿ ಆದಿತ್ಯ ರಾವ್ ಉಡುಪಿಯ ಕುಂಜಿಬೆಟ್ಟಿನಲ್ಲಿರುವ ಕರ್ಣಾಟಕ ಬ್ಯಾಂಕ್ ನಲ್ಲಿ ಸೇಫ್ ಲಾಕರ್ ಹೊಂದಿದ್ದ ಎಂಬ ಮಾಹಿತಿ ಪೊಲೀಸ್ ತನಿಖೆ ವೇಳೆ ತಿಳಿದುಬಂದ ಹಿನ್ನಲೆಯಲ್ಲಿ ಮಂಗಳೂರು ಪೊಲೀಸರು ಆರೋಪಿಯನ್ನು ಉಡುಪಿಗೆ ಕರೆದುಕೊಂಡು ಬಂದು ತಪಾಸಣೆ ನಡೆಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಉತ್ತರ ಪೊಲೀಸ್ ಉಪವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರ ತಂಡ ಆರೋಪಿ ಆದಿತ್ಯ ರಾವ್ ನನ್ನು ಉಡುಪಿಗೆ ಕರೆದುಕೊಂಡು ಬಂದಿದ್ದು ಉಡುಪಿ ನಗರ ಪೊಲೀಸರ‌ ಸಹಿತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಬಾಂಬರ್ ಕರೆತಂದಿದ್ದು ತಿಳಿಯುತ್ತಿದ್ದಂತೆಯೇ ಬ್ಯಾಂಕ್ ಮುಂಭಾಗದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ನೆರೆದಿದ್ದರು.

Comments are closed.