ಕರಾವಳಿ

ಬಾಲಕಾರ್ಮಿಕ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಬೀದಿನಾಟಕ ಪ್ರದರ್ಶನ

Pinterest LinkedIn Tumblr

ಮಂಗಳೂರು : ಬಾಲಕಾರ್ಮಿಕ ಯೋಜನೆ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್.ಸಿ & ಎಸ್.ಟಿ ಹೆಚ್ಚಾಗಿ ವಾಸಿಸುವ ಕಾಲೊನಿ ಅಥವಾ ಸ್ಲಂಗಳಿಗೆ ತೆರಳಿ ಬೀದಿನಾಟಕ ಪ್ರದರ್ಶಿಸುವ ಮೂಲಕ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ದುಡಿಮೆಗೆ ಕಳುಹಿಸದಿರುವ ಬಗ್ಗೆ ಹಾಗೂ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986ರ ಬಗ್ಗೆ ಅರಿವು ಮೂಡಿಸುವ ಕಾರ್ಯಕಮ್ರಕ್ಕೆ ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯಲ್ಲಿ ಚಾಲನೆ ನೀಡಲಾಯಿತು.

ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೂ ಹಾಗೂ ಅಮರೇಂದ್ರ, ಶ್ರೀನಿವಾಸ ನಾಯಕ್, ಯೋಜನಾ ನಿರ್ದೇಶಕರು ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಮಹಮ್ಮದ್ ರಫೀಕ್, ಉಪಸ್ಥಿತರಿದ್ದರು.

ಜನವರಿ 22 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಟ್ಟು 18 ಬೀದಿನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.

Comments are closed.