ಕರಾವಳಿ

ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಜ್ಜನ ರಾಜಕಾರಣಿ, ರಾಜ್ಯದ ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಮರನಾಥ ಶೆಟ್ಟಿ ಅವರು ಗ್ರಾಮ ಪಂಚಾಯಿತಿನಿಂದ ತೊಡಗಿ ರಾಜ್ಯದ ಸಚಿವರ ತನಕ ನಾನಾ ಸ್ತರಗಳಲ್ಲಿ ಜನಸೇವೆಯನ್ನು ಮಾಡಿರುವ ಅಪರೂಪದ ಜನನಾಯಕ. ಗ್ರಾಮ ಪಂಚಾಯಿತಿ, ಪುರಸಭೆ ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರಾಗಿ, ಸಹಕಾರಿ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ಸಮುದಾಯದ ನಾಯಕರಾಗಿ ಹೀಗೆ ವಿವಿಧ ಜವಾಬ್ದಾರಿಗಳಲ್ಲಿ ಕರ್ತವ್ಯ ಹಾಗೂ ನಿಸ್ವಾರ್ಥ ಸೇವೆಯನ್ನು ಅವರು ಮಾಡಿದ್ದಾರೆ. ಮೂಡುಬಿದಿರೆ ಸೇರಿದಂತೆ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ಅವರು ಶ್ರಮಿಸಿದ್ದಾರೆ.

ಅವರ ನಿಧನದಿಂದ ಕರಾವಳಿ ಒಬ್ಬ ಹಿರಿಯ ರಾಜಕೀಯ ಧುರೀಣರನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ, ಬಂಧುಗಳಿಗೆ ಹಾಗೂ ಅಭಿಮಾನಿಗಳಿಗೆ ಅವರ ಅಗಲುವಿಕೆ ದು:ಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ಕರುಣಿಸಲಿ ಎಂದು ಈ ಮೂಲಕ ಪ್ರಾರ್ಥಿಸುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Comments are closed.