ಕರಾವಳಿ

ಬಾಲಕಿಗೆ ಲೈಂಗಿಕ ಕಿರುಕುಳ-ಕೊಲ್ಲೂರು ಪೊಲೀಸರಿಂದ ಆರೋಪಿ ಬಂಧನ

Pinterest LinkedIn Tumblr

ಕುಂದಾಪುರ: 4ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದು ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕ ಸೂರ್ಯನಾರಾಯಣ (22) ಎಂಬಾತನೇ ಈ ದುಷ್ಕ್ರತ್ಯವೆಸಗಿ ಜೈಲು ಪಾಲಾದಾತ.

 

ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.

Comments are closed.