ಕರಾವಳಿ

ತುಂಬೆ ವೆಂಟೆಡ್ ಡ್ಯಾಂಗೆ ರಾಜ್ಯ ಮುಖ್ಯ ಕಾರ್ಯದರ್ಶಿಭೇಟಿ: ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ನೀರು ಸರಬರಾಜಿಗೆ ಸೂಚನೆ

Pinterest LinkedIn Tumblr

ಮಂಗಳೂರು ಜನವರಿ 30 : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಮಂಗಳೂರು ನಗರಕ್ಕೆ ನೀರು ಸರಬರಾಜಾಗುವ ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿದರು. ಅಣೆಕಟ್ಟಿನಲ್ಲಿ ನೀರು ಸಂಗ್ರಹ ಮಟ್ಟವನ್ನು ವೀಕ್ಷಿಸಿದ ಅವರು, ಮುಂದಿನ ಬೇಸಿಗೆಯಲ್ಲಿ ನಗರದಲ್ಲಿ ಯಾವುದೇ ರೀತಿ ನೀರಿನ ಕೊರತೆಯಾಗದಂತೆ ನೀರು ಸರಬರಾಜು ಮಾಡಲು ಸೂಚಿಸಿದರು.

ಈಗಿನ ವ್ಯವಸ್ಥೆಯಲ್ಲಿ ಅಣೆಕಟ್ಟಿನಲ್ಲಿ 6 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸುವುದು ಸೂಕ್ತವಾಗಿದೆ. ಇದೇ ಮಟ್ಟದಲ್ಲಿ ನೀರು ನಿಲ್ಲಿಸಿ, ಅಗತ್ಯ ಬಿದ್ದರೆ ರೇಶನಿಂಗ್ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಲು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.

ಸೆಲ್ವಮಣಿ, ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಉಪ ಆಯುಕ್ತೆ ಗಾಯತ್ರಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Comments are closed.