ಕರಾವಳಿ

ಸ್ಕೇಟಿಂಗ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಬಾಲ ಪ್ರತಿಭೆ ಅನಘಾ, ಕಟೀಲು ಶ್ರೀಕ್ಷೇತ್ರಕ್ಕೆ ಭೇಟಿ : ಕ್ಷೇತ್ರದ ವತಿಯಿಂದ ಸಮ್ಮಾನ

Pinterest LinkedIn Tumblr

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಐಸ್ ಸ್ಕೇಟಿಂಗ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಸ್ಕೇಟರ್ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಘಾ ಇವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ ಶಾಲು ಹೊದಿಸಿ, ದೇವಿಯ ಪ್ರಸಾದ ನೀಡಿ ಸನ್ಮಾನಿಸಿದರು.ಈ ಸಂದರ್ಭ ಅನಘಾ ಅವರ ತಂದೆ ತಾಯಿಗಳಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್,ಅಜ್ಜಿ ಮೀನಾಕ್ಷಿ ಪುತ್ರನ್,ಕ್ಷೇತ್ರದ ಪ್ರಧಾನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.

Comments are closed.