ಕರಾವಳಿ

ಜನತೆಯ ಆಶೋತ್ತರಗಳಿಗೆ ಪೂರಕವಾದ ಜನಪರ ಬಜೆಟ್ ; ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಯಂ

Pinterest LinkedIn Tumblr

ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜನತೆಯ ಆಶೋತ್ತರಗಳಿಗೆ ಪೂರಕವಾದ ಜನಪರ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಯಂ ತಿಳಿಸಿದ್ದಾರೆ.

ದೇಶದ ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ಕಾಳಜಿ ಈ ಬಜೆಟ್‌ನಲ್ಲಿ ಅಡಕವಾಗಿದೆ. ಕೃಷಿ ಅಭಿವೃದ್ಧಿ ,ಆರೋಗ್ಯ, ನೈರ್ಮಲ್ಯ,ಮೀನುಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಿರುವುದು ಗಮನಾರ್ಹ ಅಂಶ. ಆದಾಯ ತೆರಿಗೆ ಇಳಿಕೆ ಮಧ್ಯಮ ವರ್ಗದವರಿಗೆ ವರದಾನವಾಗಿದೆ ಎಂದು ಅವರು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.