ಕರಾವಳಿ

ಸರ್ಕಾರಿ ಕಚೇರಿಯಲ್ಲಿ ಸಕಾಲ ಬೋರ್ಡ್ ಕಡ್ಡಾಯ – ಸೇವೆ ನೀಡಲು ನಿರಾಕರಿಸಿದರೆ ಕ್ರಮ : ಅಪರ ಜಿಲ್ಲಾಧಿಕಾರಿ ಎಚ್ಚರಿಕೆ

Pinterest LinkedIn Tumblr

ಮಂಗಳೂರು ಫೆಬ್ರವರಿ 04 : ಸಾರ್ವಜನಿಕರಿಗೆ ಸಕಾಲ ಯೋಜನೆ ಬಗ್ಗೆ ಮಾಹಿತಿ ನೀಡಲು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಕಾಲಕ್ಕೆ ಸಂಬಂಧಿಸಿದ ಸೂಚನೆ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಮ್.ಜೆ ರೂಪಾ ರವರು ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಕಾಲದ ಸಮರ್ಪಕವಾದ ಅನುಷ್ಠಾನವನ್ನು ಪರಿಶೀಲಿಸಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಕಾಲ ಅನುಷ್ಠಾನದಲ್ಲಿ ಜಿಲ್ಲೆಯು ಈಗಾಗಲೇ ಕಡಿಮೆ ಸ್ಥಾನ ಪಡೆದುಕೊಂಡಿದೆ . ಅಧಿಕಾರಿಗಳು ಈ ಸಕಾಲ ಯೋಜನೆಯ ಅಡಿಯಲ್ಲಿ ಬರುವ ಎಲ್ಲಾ ಸೇವೆಗಳನ್ನು ಸಾರ್ವಜನಿರಿಗೆ ನೀಡಬೇಕು, ಒಂದು ವೇಳೆ ಯಾವುದೇ ಅಧಿಕಾರಿಗಳು ಈ ಸೇವೆಯನ್ನು ನೀಡಲು ನಿರಾಕರಿಸಿದರೆ ಅವರ ವಿರುದ್ಧ ಸರ್ಕಾರವು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಈ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಎಲ್ಲಾ ಅಧಿಕಾರಿ ವರ್ಗವೂ ಈ ಕಾಯ್ದೆಯ ಸಂಪೂರ್ಣವಾದ ಮಾಹಿತಿಯನ್ನು ಹೊಂದಿರಬೇಕು. ಸಕಾಲ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೆ ನಿಗದಿತ ಸಮಯದಲ್ಲಿ ಅವರಿಗೆ ಸೇವೆಯನ್ನು ನೀಡುವುದು ಸಂಬಂಧಿಸಿದ ಅಧಿಕಾರಿಯ ಜವಾಬ್ದಾರಿವಾಗಿರುತ್ತದೆ. ಎಲ್ಲಾ ಇಲಾಖೆಗಳು ಸಕಾಲ ಯೋಜನೆಯ ಅಡಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಬೇಕು ಹಾಗೆಯೇ ನಿಗದಿತ ಸಮಯದಲ್ಲಿ ಸಾರ್ವಜನಿಕ ಸೇವೆಯನ್ನು ನೀಡಬೇಕೆಂದರು.

ಮುಂದಿನ ದಿನದಲ್ಲಿ ಜಿಲ್ಲೆಯು ಉತ್ತಮ ಸಾಧನೆಯನ್ನು ಮಾಡಬೇಕು, ಆದ್ದರಿಂದ ನಾವು ಈ ಹಿಂದೆ ಮಾಡಿದ ತಪ್ಪುವನ್ನು ಪುನಃ ಮಾಡದೇ ಉತ್ತಮ ಸೇವೆ ನೀಡಿದಲ್ಲಿ ಜಿಲ್ಲೆಯು ಪ್ರಮುಖ ಸ್ಥಾನದಲ್ಲಿ ಬರುವ ಅವಕಾಶವಿದೆ ಎಂದರು.

ಈ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗ, ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

Comments are closed.