ಕರಾವಳಿ

ರಾಮಮಂದಿರ ಟ್ರಸ್ಟ್’ನಲ್ಲಿ ಉಡುಪಿ ಪೇಜಾವರ ಕಿರಿಯ ಶ್ರೀಗಳು ವಿಶ್ವಸ್ಥರಾಗಿ ನೇಮಕ

Pinterest LinkedIn Tumblr

ಉಡುಪಿ: ಬಹುದಶಕದ ಕನಸು ಅಯೋಧ್ಯೆ ರಾಮಮಂದಿರ ನಿರ್ಮಾಣ ಕೊನೆಗೂ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳ ಜೀವಿತಾವಧಿ ಕಾಲದಲ್ಲೇ ಈಡೇರಿದ್ದು ಇದೀಗ ಟ್ರಸ್ಟ್ ಒಂದನ್ನ ಕೇಂದ್ರ ಸರ್ಕಾರ ಸ್ಥಾಪಿಸಿದೆ. ರಾಮಮಂದಿರ ನಿರ್ಮಾಣ ಕುರಿತು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಟ್ರಸ್ಟ್ ರಚಿಸಿದ್ದು, ಅದರಲ್ಲಿ ಉಡುಪಿ ಪೇಜಾವರ ಮಠದ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನೂ ವಿಶ್ವಸ್ಥರನ್ನಾಗಿ ನೇಮಿಸಲಾಗಿದೆ.

ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳು ಬೃಂದಾವನಸ್ಥರಾದ ಹಿನ್ನಲೆಯಲ್ಲಿ ರಾಮಮಂದಿರ ಟ್ರಸ್ಟ್ ಗೆ ಉಡುಪಿ ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಶ್ರೀಗಳನ್ನ ರಾಮಮಂದಿರ ಟ್ರಸ್ಟ್ ವಿಶ್ವಸ್ಥರಾಗಿ ಕೇಂದ್ರ ಸರ್ಕಾರ ನೇಮಕಮಾಡಿದೆ.

ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಂದು ನಾಮಕರಣ ಮಾಡಲಾಗಿರುವ ಟ್ರಸ್ಟ್ ರಚನೆಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. ಸುಪ್ರೀಂಕೋರ್ಟ್ ಆದೇಶದಂತೆ ಈ ಟ್ರಸ್ಟ್ ರಚಿಸಲಾಗಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಕಾರ್ಯಗಳನ್ನು ನಿರ್ವಹಿಸಲಿದೆ. ದೆಹಲಿಯಲ್ಲಿ ಇದರ ಆಡಳಿತ ಕಛೇರಿ ಕಾರ್ಯನಿರ್ವಹಿಸಲಿದೆ ಎನ್ನಲಾಗುತ್ತಿದೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, 15 ಸದಸ್ಯರನ್ನು ಒಳಗೊಂಡಿದೆ.

Comments are closed.