ಕರಾವಳಿ

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ : ಮಂಗಳೂರಿನಲ್ಲಿ ಸಚಿವ ಶ್ರೀರಾಮುಲು

Pinterest LinkedIn Tumblr

ಮಂಗಳೂರು, ಫೆಬ್ರವರಿ.06: ರಾಜ್ಯದ ಯಾವೂದೇ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 10 ಬೆಡ್ ಮೀಸಲಿಡಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬುಧವಾರ ಮಂಗಳೂರಿಗೆ ಆಗಮಿಸಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೊರೊನಾ ವೈರಸ್ ಆತಂಕ ಭಯ ಸೃಷ್ಟಿ ಮಾಡಿದೆ. ವಾಹನಗಳಲ್ಲಿ ಎಲ್‌ಇಡಿ ಬ್ಯಾನರ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ.

ಇದಲ್ಲದೆ ಎನ್ ಎಂ ಪಿ ಟಿ ಹಾಗೂ ವಿಮಾನ ನಿಲ್ದಾಣದಲ್ಲಿ ಕಟ್ಟು ನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನಲೆಯಲ್ಲಿ ಸಧ್ಯದ ಸ್ಥಿತಿಯಲ್ಲಿ ಯಾವ ಆತಂಕಗಳು ಬೇಡ,. ಮಾತ್ರವಲ್ಲದೇ ಈ ಬಗ್ಗೆ ಸಾರ್ವಜನಿಕರು ಯಾರು ಕೂಡ ವದಂತಿಗಳಿಗೆ ಕಿವಿಕೊಡಬಾರದು. ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಬಂದರು, ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡುತ್ತಿದ್ದೇವೆ ಎಂದರು.

ಸಚಿವ ಸಂಪುಟ ವಿಸ್ತರಣೆಯ ಕುರಿತು ಸುದ್ಧಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಸಂಪುಟ 3 ಮಂದಿ ಡಿಸಿಎಮ್ ಇದ್ದಾರೆ, ಮುಂದಿನ ದಿನಗಳಲ್ಲಿ ಪಕ್ಷ ತೀರ್ಮಾನ ಮಾಡಿದಂತಾಗುತ್ತದೆ. ಪಕ್ಷದಲ್ಲಿ ಬಹಳಷ್ಟು ಶಾಸಕರಿಗೆ ಸಚಿವರಾಗಲು ಆಸಕ್ತಿ ಇದೆ, ಆದರೆ ಅವಕಾಶ ಬರುವವರೆಗೆ ಕಾಯಬೇಕು ಅಷ್ಟೇ ಎಂದು ಹೇಳಿದರು.

ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಗೌರವ ಸಮ್ಮಾನ:

ಇದೇ ವೇಳೆ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಪಕ್ಷದ ವತಿಯಿಂದ ಸಾಲು ಹೊದಿಸಿ ಗೌರವಿಸಲಾಯಿತು.

ಈ ವೇಳೆ ಪಕ್ಷದ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ್ ಯು. ಮಾಜಿ ಶಾಸಕ ಎನ್.ಯೋಗೀಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಜಿಲ್ಲಾಧ್ಯಕ್ಷ ರವಿಶಂಕರ್ ಮಿಜಾರ್, ಪಕ್ಷದ ಪ್ರಮುಖರಾದ ರಾಜ್ ಗೋಪಾಲ್ ರೈ, ಸಂಜಯ್ ಪ್ರಭು, ನಿತಿನ್ ಕುಮಾರ್, ಜಗದೀಶ್ ಶೇಣವ, ಗುರು ಚರಣ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Comments are closed.