ಕರಾವಳಿ

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು ಫೆಬ್ರವರಿ 06 :ಕರ್ನಾಟಕ ಸರಕಾರ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ರವರ ದ.ಕ. ಜಿಲ್ಲೆಯ ಪ್ರವಾಸ ಇಂತಿವೆ.

ಫೆಬ್ರವರಿ 7 ರಂದು ಮಧ್ಯಾಹ್ನ 2.30 ಗಂಟೆಗೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿ 3.15 ಗಂಟೆಗೆ ಬಂಟ್ಟಾಳ ತಾಲೂಕಿನ ಅಂಟಾಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4.15 ಕ್ಕೆ ಕಾರ್‍ಸ್ಟ್ರೀಟ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಟ್ಟಡ ನಿರ್ಮಾಣ ಸಂಬಂಧ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 4.45 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇವರು ಆಯೋಜಿಸಿರುವ 39ನೇ ರಾಜ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.