ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪ್ರಕರಣವಿಲ್ಲ, ಆತಂಕ ಬೇಡ: ಡಿಸಿ ಜಿ. ಜಗದೀಶ್

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ವೈರಸ್ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಭಾನುವಾರ ಮಾಹಿತಿ ನೀಡಿದ ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸಾ ಹಿನ್ನೆಲೆ ದಾಖಲಾದ ನಾಲ್ವರು ಶಂಕಿತ ರೋಗಿಗಳ ಕಫ ಹಾಗೂ ರಕ್ತವನ್ನು ಬೆಂಗಳೂರಿಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಸದ್ಯ ಅದರ ವರದಿ ಜಿಲ್ಲಾಡಳಿತದ ಕೈಸೇರಿದ್ದು ಶಂಕಿತರ ವೈದ್ಯಕೀಯ ವರದಿ ನೆಗೆಟಿವ್ ಎಂದು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Comments are closed.